“ನಿಮ್ಮೊಂದಿಗೆ ನಾವಿದ್ದೇವೆ”- 3 ತಿಂಗಳ ಬಳಿಕ ಭಾವುಕ ಪೋಸ್ಟ್ ಹಂಚಿಕೊಂಡ RCB



(ನ್ಯೂಸ್ ಕಡಬ) newskadaba.com ಆ. 28. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ 3 ತಿಂಗಳ ಕಳೆದಿದ್ದು, ಇದೀಗ ಆರ್ ಸಿಬಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹರಿಬಿಟ್ಟಿದೆ..





 

ಆರ್ ಸಿಬಿ ಟ್ವೀಟರ್ ಖಾತೆಯಲ್ಲಿ 3 ತಿಂಗಳ ಬಳಿಕ ಪೋಸ್ಟ್ ಹಂಚಿಕೊಂಡಿದ್ದು, ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳು ಕಾಲ ಕಳೆದಿದೆ.






ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ ಜೂನ್ 4ರ ಘಟನೆ ಎಲ್ಲವನ್ನೂ ಬದಲಾಯಿಸಿತು. ಆ ದಿನ ನಮ್ಮ ಹೃದಯವನ್ನು ಮುರಿಯಿತು. ನಂತರದ ಮೌನವು ಕೇವಲ ನಿಶ್ಯಬ್ಧವಲ್ಲ, ಅದು ಶ್ರದ್ಧೆಯಿಂದ ತುಂಬಿದ ಶಾಂತ ಶ್ರದ್ಧಾಂಜಲಿ.

ಈ ಮೌನದೊಳಗೆ ನೋವನ್ನು ಅನುಭವಿಸುತ್ತಾ ನಾವು ಆಳವಾಗಿ ಯೋಚಿಸಿದ್ದೆವು ಮತ್ತು ಅನೇಕ ವಿಷಯಗಳನ್ನು ಕಲಿತೆವು. ನೋವನ್ನೇ ಶ್ರದ್ಧೆಯಾಗಿ, ನಂಬಿಕೆಯಾಗಿ ರೂಪಿಸಬೇಕೆಂದು ತೀರ್ಮಾನಿಸಿದ್ದೆವು. ಅದರ ಫಲವೇ ಆರ್ ಸಿಬಿ ಕೇರ್ಸ್(RCB Cares). ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಒಂದು ಯೋಜನೆ.
ಇಂದು ನಾವು ಮರಳಿದ್ದೇವೆ; ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತಾ, ಕರ್ನಾಟಕದ ಹೆಮ್ಮೆಯಾಗಿ ಮುಂದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ.
ಆರ್ಸಿಬಿ ಕೇರ್ಸ್: ನಾವು ಸದಾ ನಿಮ್ಮೊಂದಿಗಿದ್ದೇವೆ.ಹೆಚ್ಚಿನ ಮಾಹಿತಿ… ಶೀಘ್ರದಲ್ಲೇ.
ಎಂಬುವುದಾಗಿ ಪೋಸ್ಟ್ ಮಾಡಿದೆ.

error: Content is protected !!
Scroll to Top