ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್



(ನ್ಯೂಸ್‌ ಕಡಬ) newskadaba.com, ಆ.28: ನವದೆಹಲಿ: ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕೆಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗುರುವಾರ ಒತ್ತಾಯಿಸಿದ್ದು, ಇಡೀ ದೇಶ ಈ ನಿರ್ಧಾರವನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.







ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅಮೆರಿಕದಿಂದ ಆಮದು ಮಾಡಿಕೊಳ್ಳುವ ಹತ್ತಿಯ ಮೇಲಿನ ಶೇಕಡಾ 11 ರಷ್ಟು ಸುಂಕವನ್ನು ಮನ್ನಾ ಮಾಡಲು ನಿರ್ಧರಿಸಿದೆ. ಇದು ಇಲ್ಲಿನ ಸ್ಥಳೀಯ ರೈತರ ವ್ಯವಹಾರದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಆರೋಪಿಸಿದರು.






ಅರವಿಂದ್ ಕೇಜ್ರಿವಾಲ್ ಅವರ ಈ ಆರೋಪಕ್ಕೆ ಕೇಂದ್ರ ಸರ್ಕಾರದಿಂದ ತಕ್ಷಣ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

error: Content is protected !!
Scroll to Top