ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ಬಹುಮಾನದ ಮೊತ್ತ ಹೆಚ್ಚಳ-ಸಿಎಂ



(ನ್ಯೂಸ್ಕಡಬ) newskadaba.com ಬೆಂಗಳೂರು, ಆ. 29. ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನದ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.





ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ನಗದು ಪುರಸ್ಕಾರವನ್ನು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.






ಚಿನ್ನ ಗೆದ್ದವರಿಗೆ 7 ಲಕ್ಷ ರೂ., ಬೆಳ್ಳಿ ಪದಕಕ್ಕೆ ₹5 ಲಕ್ಷ ಮತ್ತು ಕಂಚು ಪದಕಕ್ಕೆ ₹3 ಲಕ್ಷ ನೀಡಲಾಗುವುದು ಎಂದು ತಿಳಿಸಿದ ಅವರು, ನಮ್ಮ ರಾಜ್ಯದವರು ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದರೆ 5 ಕೋಟಿ ರೂ. ನಗದು ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

error: Content is protected !!
Scroll to Top