ಬೆಂಗಳೂರು- ಗುರುದ್ವಾರಕ್ಕೆ ಬಾಂಬ್ ಸ್ಫೋಟ ಬೆದರಿಕೆ



(ನ್ಯೂಸ್‌ ಕಡಬ) newskadaba.com, ಆಗಸ್ಟ್ 29  ಬೆಂಗಳೂರು:ಗು ರುದ್ವಾರಕ್ಕೆ ಬಾಂಬ್ ಬೆದರಿಕೆ  ಇ-ಮೇಲ್ ಸಂದೇಶ ಬಂದಿದೆ. ಕಳೆದ ನಾಲ್ಕು ದಿನಗಳ ಹಿಂದೆಯೇ ಇ-ಮೇಲ್ ಮೂಲಕ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ನಾಲ್ಕು ಆರ್‌ಡಿ ಎಕ್ಸ್ ಐ ಇ ಡಿ ಯಿಂದ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿತ್ತು. ಹೀಗಾಗಿ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.







ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬೆ ಇಟ್ಟಿದ್ದಾಗಿ ಈ ಮೇಲ್ ಸಂದೇಶ ಬಂದಿತ್ತು. ರಾಜಗಿರಿ ಎಂಬ ಹೆಸರಿನಲ್ಲಿ ಈ ಒಂದು ಇಮೇಲ್ ಬೆದರಿಕೆ ಸಂದೇಶ ಬಂದಿದೆ. ಹಲಸೂರು ಸಮೀಪ ಇರುವ ಗುರು ಸಿಂಗ್ ಸಭಾ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಋಷಿಪಾಲ್ ಸಿಂಗ್ ದೂರು ಆಧರಿಸಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಯಲ್ಲಿ ಇದೀಗ ಪ್ರಕರಣ ದಾಖಲಾಗಿದೆ.






ಇತ್ತೀಚೆಗೆ ನಗರದ ಸಿಟಿ ಸಿವಿಲ್ ಕೋರ್ಟ್‌ಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಲಾಗಿತ್ತು. ಅನಾಮಧೇಯ ವ್ಯಕ್ತಿಯಿಂದ ಇ-ಮೇಲ್ ಬಂದಿದ್ದು, ಈ ವಿಷಯ ತಿಳಿದು ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಬಾಂಬ್‌ಗಾಗಿ ಹುಡುಕಾಟ ನಡೆಸಿದ್ದು, ಹುಸಿ ಬೆದರಿಕೆ ಎಂದು ಗೊತ್ತಾಗಿತ್ತು. ಅದಕ್ಕೂ ಮುನ್ನ ಬೆಂಗಳೂರು ಹಾಗೂ ಕಲಬುರಗಿ ವಿಮಾನ ನಿಲ್ದಾಣಗಳಿಗೆೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಕಚೇರಿಗೆ ಹಾಗೂ ಹಲವು ಶಾಲೆಗಳಿಗೆ ಇಂಥ ಹುಸಿ ಬಾಂಬ್‌ ಬೆದರಿಕೆಗಳು ಬಂದಿದ್ದವು.

 

error: Content is protected !!
Scroll to Top