(ನ್ಯೂಸ್ ಕಡಬ) newskadaba.com, ಆ.29: ಗಿರೀಶ್ ಮಟ್ಟಣ್ಣನವರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಗಿರೀಶ್ ಮಟ್ಟಣ್ಣನವರ್ ವಿರುದ್ದ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.
ಧರ್ಮಸ್ಥಳದ ಸಾಮೂಹಿಕ ವಿವಾಹದ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಹೇಳಿಕೆ ನೀಡಿದ್ದು, ಹೆಣ್ಣು ಮಕ್ಕಳ ಗೌರವಕ್ಕೆ ಧಕ್ಕೆ ತಂದಿರುವ ಆರೋಪದ ಹಿನ್ನೆಲೆ ಇದೀಗ ಕಾವೇರಿ ಕೇದಾರನಾಥ್ ಅವರ ನೇತೃತ್ವದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.
ಧರ್ಮಸ್ಥಳದ ಸಾಮೂಹಿಕ ವಿವಾಹದ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಮಾತನಾಡಿದ್ದು, ಹೆಣ್ಣು ಮಕ್ಕಳ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಕಾವೇರಿ ಕೇದಾರನಾಥ ಅವರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.












