(ನ್ಯೂಸ್ ಕಡಬ) newskadaba.com, ಆ.30: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆ.5ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಬೆಳಗಾವಿ, ಕೊಡಗು, ಧಾರವಾಢ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹಾವೇರಿ, ಗದಗ, ಬೀದರ್, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಾಬಳ್ಳಾಪುರ ಜಿಲ್ಲೆಗಳಲ್ಲಿ ಕೂಡ ವರ್ಷಧಾರೆಯಾಗಲಿದೆ.












