ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ತಪ್ಪಿದ ಮೂಡುಬಿದಿರೆ ಕ್ಷೇತ್ರದ ಟಿಕೆಟ್ ► ಬೇಸತ್ತ ಯುವ ಕಾಂಗ್ರೆಸ್ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.17. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರಿಗೆ ಟಿಕೆಟ್ ಕೈ ತಪ್ಪಿರುವುದರಿಂದ ಬೇಸತ್ತು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್ ರೈಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ಕುರಿತು ಭರವಸೆ ನೀಡಿದ್ದರಿಂದ ಮಿಥುನ್ ರೈಯವರು ಕಳೆದ ಮೂರು ವರ್ಷಗಳಿಂದ ಮುಲ್ಕಿಯಲ್ಲಿ ಸಕ್ರಿಯವಾಗಿ ತನ್ನನ್ನು ತೊಡಗಿಸಿಕೊಂಡಿದ್ದರು. ಆದರೆ ಇದೀಗ ಟಿಕೆಟ್ ಕೈ ತಪ್ಪಿರುವುದರಿಂದ ಬೇಸತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Also Read  ನಾಳೆಯಿಂದ (ಮಾ. 01) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 36,147 ವಿದ್ಯಾರ್ಥಿಗಳ ನೋಂದಣಿ

error: Content is protected !!
Scroll to Top