ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರೈತರಿಗೆ ಗುಡ್ ನ್ಯೂಸ್; ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ – News Kadaba

ರೈತರಿಗೆ ಗುಡ್ ನ್ಯೂಸ್; ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಬೆಂಗಳೂರು: ಕೇಂದ್ರ ಸರ್ಕಾರವು ರೈತರಿಗೆ ಬಂಪರ್‌ ಕೊಡುಗೆಯನ್ನು ನೀಡಲು ಮುಂದಾಗಿದೆ. ಜನೌಷಧಿ ಕೇಂದ್ರಗಳ ಮಾದರಿಯಲ್ಲಿ, ರೈತರಿಗೆ  ಕಡಿಮೆ ದರದಲ್ಲಿ ಕೀಟನಾಶಕಗಳನ್ನು ಒದಗಿಸಲು ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಕೀಟನಾಶಕ ಕೇಂದ್ರಗಳನ್ನು ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ  ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳು ರಿಯಾಯಿತಿ ದರದಲ್ಲಿ ಔಷಧಿಗಳನ್ನು ಒದಗಿಸುವಂತೆ, ರೈತರಿಗೆ ಅಗತ್ಯವಾದ ಕೀಟನಾಶಕಗಳನ್ನು ಕಡಿಮೆ ದರದಲ್ಲಿ ಒದಗಿಸುವ ಯೋಜನೆಯ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

 

ಮಂಡ್ಯ, ತುಮಕೂರು, ಹಾಸನ, ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತೆಂಗು ಬೆಳೆಯುವ ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸಚಿವ ವಿ. ಸೋಮಣ್ಣ ಅವರು ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿ, ಈ ಜಿಲ್ಲೆಗಳ ರೈತರ ಸಮಸ್ಯೆಗಳ ತೀವ್ರತೆಯನ್ನು ತಿಳಿದುಕೊಂಡಿದ್ದಾರೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಶುಕ್ರವಾರ ಸಂಜೆ ಬೆಂಗಳೂರಿಗೆ ಆಗಮಿಸಿದ್ದು, ತೆಂಗು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಸೋಮಣ್ಣ ಭರವಸೆ ನೀಡಿದ್ದಾರೆ.

 

 

Scroll to Top