(ನ್ಯೂಸ್ ಕಡಬ) newskadaba.com ಸೆ. 01. ಬಸ್, ವಿದ್ಯುತ್, ನೀರು, ಹಾಲು ಮೆಟ್ರೋ ದರ ಸೇರಿದಂತೆ ವಿವಿಧ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು, ಇಂದಿನಿಂದಲೇ ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ಶೇ.1 ರಿಂದ ಶೇ.2 ರಷ್ಟು ಏರಿಕೆ ಮಾಡಿದೆ.
ಆಸ್ತಿ ಖರೀದಿ ನೋಂದಣಿ ಶುಲ್ಕವನ್ನು ಹಿಂದಿನ ದರಕ್ಕಿಂತ ದುಪ್ಪಟ್ಟು ದರಕ್ಕೆ ಏರಿಕೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ನೋಂದಣಿ ಶುಲ್ಕ ಶೇ.1 ರಿಂದ ಶೇ.2 ರಷ್ಟು ಏರಿಕೆ ಮಾಡಲಾಗಿದೆ. ಮಾರ್ಗಸೂಚಿ ದರದ ಪ್ರಮಾಣಕ್ಕೆ ಅನುಗುಣವಾಗಿ ನೋಂದಣಿ ಶುಲ್ಕ ನಿಗದಿ ಮಾಡಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಈವರೆಗೂ ನಿವೇಶನ, ಭೂಮಿ, ಫ್ಲ್ಯಾಟ್, ಮನೆ ಸೇರಿದಂತೆ ಸ್ಥಿರಾಸ್ತಿ ಖರೀದಿ ವೇಳೆ ಶೇ.1ರಷ್ಟು ನೋಂದಣಿ ಶುಲ್ಕ ಹಾಗೂ ಶೇ.5.6ರಷ್ಟು ಮುದ್ರಾಂಕ ಶುಲ್ಕ ಸೇರಿ ಶೇ.6.6ರಷ್ಟು ಶುಲ್ಕ ಇತ್ತು. ಆದರೆ ಈಗ ಏರಿಕೆಯಿಂದ ಒಟ್ಟು ಶೇ.7.6ರಷ್ಟು ಶುಲ್ಕ ಪಾವತಿಸಬೇಕಾಗುತ್ತದೆ.













