(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ಮುಕ್ಕ ಜಂಕ್ಷನ್ ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ ಎಂದು ಗುರುತಿಸಲಾಗಿದೆ. ಗಾಯಗೊಂಡ ವಿಶ್ವನಾಥ (16) ಎಂಬವರು ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತ ನಡೆಸಿದ್ದ ಕಾರು ಚಾಲಕ ಹಳೆಯಂಗಡಿ ನಿವಾಸಿ ಮುಹಮ್ಮದ್ ತೌಫೀಕ್ ಎಂಬಾತನನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.








