ಅಕ್ರಮ ಮದ್ಯ ತಯಾರಿಕಾ ಘಟಕಕ್ಕೆ ಪೊಲೀಸ್ ದಾಳಿ- ಇಬ್ಬರ ಬಂಧನ



(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಅಕ್ರಮ ಮದ್ಯ ತಯಾರಿ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ರವಿವಾರದಂದು ವರದಿಯಾಗಿದೆ.





ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ .(24)‌ ಎಂದು ಗುರುತಿಸಲಾಗಿದೆ. ಆರೋಪಿಗಳು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮ






ದ ಕಂಬಳಪದವು ಶ್ರೀ ದುರ್ಗಾ ಕಾಳಿ ದೇವಸ್ಥಾನದ ರಸ್ತೆಯಲ್ಲಿರುವ ಮನೆಯೊಂದರಲ್ಲಿ ತೋಮಸ್ ಮತ್ತು ಮಣಿಕುಟ್ಟನ್ ಜೊತೆ ಸೇರಿಕೊಂಡು ಅಕ್ರಮವಾಗಿ ಮದ್ಯ ತಯಾರಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದ

ದಾಳಿ ಸಂದರ್ಭ ತೋಮಸ್ ಮತ್ತು ಮಣಿಕುಟ್ಟನ್ ಎಂಬವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದು, ಈ ವೇಳೆ ಸುಮಾರು 1,15,110 ರೂ. ಮೌಲ್ಯ ದ ಮದ್ಯ ತಯಾರಿಕೆಯ ಮೂರು ಮೆಷಿನ್ ಗಳು, ಮಿಕ್ಸರ್ ಮೆಷಿನ್, ಅಕ್ರಮ ಮದ್ಯದ ಬಾಟ್ಲಿಗಳು, ಗೋವಾದಲ್ಲಿ ಮಾತ್ರ ಮಾರಾಟ ಮಾಡುವ ಪರವಾನಿಗೆ ಇರುವ 8 ಮನ್ಶನ್ ಹೌಝ್ ಎಂಬ ಹೆಸರಿನ ಮದ್ಯದ ಬಾಟ್ಲಿಗಳು, ಮದ್ಯ ತಯಾರಿಕೆಗೆ ಬೇಕಾದ ಇತರ ಸೊತ್ತುಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top