‘ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆ’-ಮೋದಿ

(ನ್ಯೂಸ್‌ ಕಡಬ) newskadaba.com ಸೆ. 01. ಭಯೋತ್ಪಾದನೆ ಜಾಗತಿಕ ಶಾಂತಿಗೆ ಮತ್ತು ಭದ್ರತೆಗೆ ಅತಿದೊಡ್ಡ ಬೆದರಿಕೆಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚೀನಾದ ಟಿಯಾಂಜಿನ್‌ ನಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯದ್ದೇಶಿಸಿ ಮಾತನಾಡಿದರು.

ಭಯೋತ್ಪಾದನೆ ಜಾಗತಿಕ ಶಾಂತಿಗೆ ಅತಿದೊಡ್ಡ ಬೆದರಿಕೆಯಾಗಿದ್ದು, ಭಯೋತ್ಪಾದನೆಯಲ್ಲಿ ದ್ವಿಮುಖ ಧೋರಣೆ ವಿರುದ್ಧ ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಹೇಳಿದರು. ಕಳೆದ 4 ದಶಕಗಳಿಂದ ಭಯೋತ್ಪಾದನೆಯ ಭಾರವನ್ನು ಭಾರತ ಹೊರುತ್ತಿದೆ. ಇತ್ತೀಚೆಗೆ, ಪಹಲ್ಗಾಮ್‌ ನಲ್ಲಿ ಭಯೋತ್ಪಾದನೆಯ ಕರಾಳ ಮುಖವನ್ನು ನಾವೆಲ್ಲರೂ ನೋಡಿದ್ದೇವೆ. ಈ ದುಃಖದ ಸಮಯದಲ್ಲಿ ನಮ್ಮೊಂದಿಗೆ ನಿಂತ ಸ್ನೇಹಪರ ದೇಶಕ್ಕೆ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದರು.

ಇದೇ ವೇಳೆ ಗಡಿಯಾಚೆಗಿನ ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ಉಗ್ರವಾದಕ್ಕೆ ಶೂನ್ಯ ಸಹಿಷ್ಣುತೆಗಾಗಿ ಮೋದಿಯವರು ಕರೆ ನೀಡಿದರು. ಎಸ್​ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ನನಗೆ ಸಂತೋಷವಾಗಿದೆ. ನಮಗೆ ಭವ್ಯ ಸ್ವಾಗತ ನೀಡಿದ್ದಕ್ಕಾಗಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದರು.

 

Scroll to Top