ಹೈದರಾಬಾದ್‌ನಲ್ಲಿ ಕಿಡ್ನ್ಯಾಪ್‌ ಜಾಲ ಪತ್ತೆ – ಐವರು ಅರೆಸ್ಟ್‌, 6 ಮಕ್ಕಳ ರಕ್ಷಣೆ



(ನ್ಯೂಸ್‌ ಕಡಬ) newskadaba.com,  ಸೆ.02 ಹೈದರಾಬಾದ್: ನಗರದಲ್ಲಿ ಐದು ವರ್ಷಗಳಿಂದ ನಡೆಯುತ್ತಿದ್ದ ಮಕ್ಕಳ ಅಪಹರಣ ಜಾಲವನ್ನು  ಪೊಲೀಸರು ಪತ್ತೆಹಚ್ಚಿದ್ದಾರೆ. ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.







ಐದು ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಹೈದರಾಬಾದ್, ಸೈಬರಾಬಾದ್ ಮತ್ತು ಸಂಗರೆಡ್ಡಿ ಜಿಲ್ಲೆಗಳಲ್ಲಿ ಈ ಗ್ಯಾಂಗ್ ಕಾರ್ಯನಿರ್ವಹಿಸುತ್ತಿತ್ತು. ಈ ಗ್ಯಾಂಗ್ ಹೆಚ್ಚು ಮಕ್ಕಳನ್ನು ಹೊಂದಿರುವ ಕಾರ್ಮಿಕ ವರ್ಗದ ಪೋಷಕರನ್ನು ಗುರಿಯಾಗಿಸಿಕೊಂಡು ಅಪಹರಣ ದಂಧೆಯಲ್ಲಿ ತೊಡಗಿತ್ತು. ಅಪಹರಣ ಮಾಡಿದ ಮಕ್ಕಳನ್ನು, ಮಕ್ಕಳಿಲ್ಲದವರಿಗೆ 1 ಲಕ್ಷದಿಂದ 7 ಲಕ್ಷ ರೂ.ಗಳವರೆಗೆ ಮಾರಾಟ ಮಾಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಜಿ. ವಿನೀತ್ ತಿಳಿಸಿದ್ದಾರೆ.






 

 

error: Content is protected !!
Scroll to Top