ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪ್ರಧಾನಿ ಮೋದಿಗೆ ಮೊದಲ ಸ್ವದೇಶಿ ನಿರ್ಮಿತ ಸೆಮಿಕಂಡಕ್ಟರ್ ಚಿಪ್ ಹಸ್ತಾಂತರ – News Kadaba

ಪ್ರಧಾನಿ ಮೋದಿಗೆ ಮೊದಲ ಸ್ವದೇಶಿ ನಿರ್ಮಿತ ಸೆಮಿಕಂಡಕ್ಟರ್ ಚಿಪ್ ಹಸ್ತಾಂತರ

(ನ್ಯೂಸ್‌ ಕಡಬ) newskadaba.com,  ಸೆ.02:ನವದೆಹಲಿ: ಭಾರತದ ಮೊದಲ ಸ್ವದೇಶಿ ನಿರ್ಮಿತ ವಿಕ್ರಮ್-32 ಬಿಟ್ ಪ್ರೊಸೆಸರ್ ಚಿಪ್ ಅನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಹಸ್ತಾಂತರಿಸಿದರು

ದೆಹಲಿಯಲ್ಲಿ ನಡೆಯುತ್ತಿರುವ ಸೆಮಿಕಾನ್ ಇಂಡಿಯಾ 2025 ರಲ್ಲಿ ಕಾರ್ಯಕ್ರಮದಲ್ಲಿ 4 ಅನುಮೋದಿತ ಯೋಜನೆಗಳ ಪರೀಕ್ಷಾ ಚಿಪ್‌ಗಳೊಂದಿಗೆ ಮೊದಲ ಮೇಡ್ ಇನ್ ಇಂಡಿಯಾ ಪ್ರೊಸೆಸರ್ ಅನ್ನು ಹಸ್ತಾಂತರಿಸಲಾಯಿತು.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸೆಮಿಕಂಡಕ್ಟರ್ ಲ್ಯಾಬೋರೇಟರಿ ಅಭಿವೃದ್ಧಿಪಡಿಸಿದ ವಿಕ್ರಮ್ ಚಿಪ್, ರಾಷ್ಟ್ರದ ಮೊದಲ ಸಂಪೂರ್ಣ ಸ್ಥಳೀಯ 32-ಬಿಟ್ ಮೈಕ್ರೊಪ್ರೊಸೆಸರ್ ಆಗಿದೆ. ಈ ಚಿಪ್ ಅನ್ನು ಬಾಹ್ಯಾಕಾಶ ಉಡಾವಣಾ ವಾಹನಗಳಿಗಾಗಿ ವಿನ್ಯಾಸಗೊಳಿಸಲಾಗಿದೆ. ಇದು ಆಮದುಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ.

ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಅಶ್ವಿನಿ ವೈಷ್ಣವ್, “ನಾವು ಭಾರತದ ಸೆಮಿಕಂಡಕ್ಟರ್ ಮಿಷನ್ ಅನ್ನು ಪ್ರಾರಂಭಿಸಿದ್ದೇವೆ. ಮೂರೂವರೆ ವರ್ಷಗಳ ಅಲ್ಪಾವಧಿಯಲ್ಲಿ ಜಗತ್ತು ಭಾರತವನ್ನು ವಿಶ್ವಾಸದಿಂದ ನೋಡುತ್ತಿದೆ. ಇಂದು 5 ಸೆಮಿಕಂಡಕ್ಟರ್ ಘಟಕಗಳ ನಿರ್ಮಾಣವು ತ್ವರಿತಗತಿಯಲ್ಲಿ ನಡೆಯುತ್ತಿದೆ. ನಾವು ಪ್ರಧಾನಿ ಮೋದಿ ಅವರಿಗೆ ಮೊದಲ ಭಾರತದಲ್ಲಿ ತಯಾರಿಸಿದ (ಮೇಡ್ ಇನ್ ಇಂಡಿಯಾ) ಚಿಪ್ ಅನ್ನು ಹಸ್ತಾಂತರಿಸಿದ್ದೇವೆ” ಎಂದು ತಿಳಿಸಿದರು

Scroll to Top