ಸಿಎಂ ಭೇಟಿಯಾದ ಭಾರತಿ ವಿಷ್ಣುವರ್ಧನ್; ವಿಷ್ಣು ಸ್ಮಾರಕಕ್ಕೆ ಭೂಮಿ, ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ

(ನ್ಯೂಸ್‌ ಕಡಬ) newskadaba.com, ಸೆ. 03: ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮತ್ತು ನಟ ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿಯಾಗಿ, ವಿಷ್ಣು ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗ ಒದಗಿಸಬೇಕು ಹಾಗೂ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನʼ ಪ್ರಶಸ್ತಿ ನೀಡಬೇಕೆಂದು ಮನವಿ ಮಾಡಿದರು.

ಅಭಿಮಾನ್‌ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್‌ ಸಮಾಧಿ ತೆರವು ಮಾಡಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ತೀವ್ರ ಆಕ್ರೋಶ ಹೊರಹಾಕಿದ್ದರು. ಈ ಸ್ಥಳವು ಅಭಿಮಾನಿಗಳಿಗೆ ಅತ್ಯಂತ ಭಾವನಾತ್ಮಕ ನೆನಪಿನ ಸ್ಥಳವೂ ಆಗಿದೆ. ಹೀಗಾಗಿ ಆ ಜಾಗದಲ್ಲಿ ಮತ್ತೆ ವಿಷ್ಣು ಸ್ಮಾರಕ ನಿರ್ಮಿಸಲು ಭೂಮಿ ಮಂಜೂರು ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ.

Scroll to Top