ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ



(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು : ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.







ಅನು, ಪುಷ್ಕರ್ ಕುಮಾರ್ (25 ) ಹಾಗು ಜ್ಯೋತಿಕುಮಾರಿ (22) ದಂಪತಿಯ ಪುತ್ರಿ ಅನು ಮೃತ ಮಗು. ನೇಪಾಳ ಮೂಲದ ದಂಪತಿ ಕಳೆದ 8 ವರ್ಷಗಳಿಂದ ಇಲ್ಲೇ ವಾಸಮಾಡುತ್ತಿದ್ದರು. ದಂಪತಿ ಮನೆಯಲ್ಲಿ ಮಗು ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಮಗು ಸಾವನ್ನಪ್ಪಿದೆ.






ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

error: Content is protected !!
Scroll to Top