ಮಹಿಳೆ ಮೇಲೆ ಅತ್ಯಾಚಾರ, ಜಾತಿ ನಿಂದನೆ ಆರೋಪ: ಮುನಿರತ್ನಗೆ ಬಿಗ್ ರಿಲೀಫ್



(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ, ಜಾತಿನಿಂದನೆ ಸೇರಿದಂತೆ ಒಟ್ಟು ಆರು ಕೃತ್ಯಗಳನ್ನು ಎಸಗಿದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ.







ಪ್ರಕರಣದ ತನಿಖೆ ನಡೆಸಿದ ಸಿಐಡಿ ಎಸ್‌ಐಟಿ ಅಧಿಕಾರಿಗಳು ಮೂರು ಪ್ರಕರಣಗಳಲ್ಲಿ ಸೂಕ್ತ ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆ ಮೂಲಕ, ಅತ್ಯಾಚಾರ ಮಾಡಿಸಿದ್ದರು ಎನ್ನಲಾಗಿದ್ದ ಆರೋಪದಡಿ ತನಿಖೆ ಎದುರಿಸಿದ್ದ ಮುನಿರತ್ನಗೆ ಕ್ಲೀನ್ ಚಿಟ್ ಸಿಕ್ಕಿದೆ.






ಸಿಐಡಿ ಎಸ್‌ಐಟಿ ಬಿ ರಿಪೋರ್ಟ್ ಸಲ್ಲಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಮುನಿರತ್ನ, “ಇದು ಸತ್ಯಕ್ಕೆ ಸಂದ ಜಯವಾಗಿದೆ. ಕಂಡವರ ಹೆಣ್ಣು ಮಕ್ಕಳಿಂದ ದೂರು ಕೊಡಿಸುವುದನ್ನು ಬಿಡಬೇಕು. ಡಿಕೆ ಸುರೇಶ್ ಸೋತ ನಂತರ, ಕುಸುಮಾ ಸೋತ ನಂತರ ನನ್ನ ವಿರುದ್ಧ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗಿವೆ. ಯಾರಿಗೆ ಯಾವುದೂ ಶಾಶ್ವತವಲ್ಲ, ನಾನು ಎಲ್ಲವನ್ನು ದೇವರಿಗೆ ಬಿಟ್ಟಿದ್ದೇನೆ. ಸುದ್ದಿಗೋಷ್ಠಿ ನಡೆಸಿ, ಎಲ್ಲ ಮಾಹಿತಿಗಳನ್ನು ಹಂಚಿಕೊಳ್ಳುತ್ತೇನೆ” ಎಂದು ತಿಳಿಸಿದರು.

error: Content is protected !!
Scroll to Top