ನ್ಯೂಸ್ ಕಡಬ) newskadaba.com, ಸೆ.06 ಬೆಂಗಳೂರು: ಸರ್ಕಾರಿ ಶಾಲೆಗಳ ಸ್ಥಾಪನೆ, ಅತ್ಯುತ್ತಮ ಕಟ್ಟಡಗಳನ್ನು ನಿರ್ಮಿಸಿಕೊಡುವ ಕಂಪನಿಗಳ ಹೆಸರನ್ನೇ ಶಾಲೆಗೆ ಇಡಲು ಅನುಮತಿ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ.
ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಿ, ಮಾತನಾಡಿದ ಅವರು, ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆ ಆಗುತ್ತಿದೆ. ಇದಕ್ಕೆ ಪರಿಹಾರ ತರಬೇಕೆಂದು ಸಿಎಸ್‌ಆರ್ ಪಾಲಿಸಿ ತರಬೇಕೆಂದು ನಾವು ಯೋಜನೆ ರೂಪಿಸುತ್ತಿದ್ದೇವೆ. ಮುಂಬರುವ ಸಚಿವ ಸಂಪುಟ ಸಭೆಯಲ್ಲಿ, ಸಿಎಸ್‌ಆರ್ ನಿಧಿಯನ್ನು ಬಳಸಿಕೊಂಡು ಶಾಲೆಗಳನ್ನು ನಿರ್ಮಿಸಲು ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗುವುದು. ಶಾಲೆಗಳ ಕಟ್ಟಡಗಳನ್ನು ಅತ್ಯುತ್ತಮವಾಗಿ ನಿರ್ಮಿಸುವ ಕಂಪನಿಗಳು, ಆ ಶಾಲೆಗಳಿಗೆ ತಮ್ಮ ಬ್ರ್ಯಾಂಡ್ ಹೆಸರಿಡಲು ಅವಕಾಶ ನೀಡಲಾಗುತ್ತದೆ. ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಲು ಪಂಚಾಯತಿ ಮಟ್ಟದಲ್ಲಿ ಸಿಎಸ್‌ಆರ್ ಯೋಜನೆಯಡಿ 2000 ಶಾಲೆಗಳನ್ನು ನಿರ್ಮಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿದರು.
ʼಇತ್ತೀಚೆಗೆ ಪತ್ರಿಕೆಯಲ್ಲಿ ಒಂದು ವರದಿ ಓದಿದೆ. ಸರ್ಕಾರಿ ಶಾಲೆಗಳನ್ನು ತೊರೆದು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿದ್ದಾರೆ ಎಂದು. ಅದಕ್ಕೆ ನಾವು ಸಿಎಸ್‌ಆರ್ ಹಣದ ತೊಡಗಿಸುವಿಕೆಗೆ ಪ್ರೋತ್ಸಾಹ ನೀಡುತ್ತಿದ್ದೇವೆ. ನಮ್ಮ ರಾಜ್ಯದಲ್ಲಿ 7,800 ಕೋಟಿಯಷ್ಟು ಹಣವನ್ನು ಸಿಎಸ್‌ಆರ್ ಹಣ ಲಭ್ಯವಿದೆ ಎಂದು ವರದಿಗಳು ಹೇಳುತ್ತವೆ. ಒಂದಷ್ಟು ಜನ ಉದ್ಯಮಿಗಳು ಇನ್ನೂ ಮನಸು ಮಾಡಿಲ್ಲ. ನನ್ನ ಕ್ಷೇತ್ರದಲ್ಲಿ ಕೆಪಿಎಸ್ ಶಾಲೆಗಳ ವಿಚಾರದಲ್ಲಿ ಅತ್ಯುತ್ತಮ ಕೆಲಸವಾಗಿದೆ. ನನ್ನ ಕ್ಷೇತ್ರದಲ್ಲಿ ಟೊಯೋಟಾ ಕಂಪೆನಿಯವರು ತಲಾ 10 ಕೋಟಿ ವೆಚ್ಚದಲ್ಲಿ 7 ಕೆಪಿಎಸ್ ಶಾಲೆ ನಿರ್ಮಾಣ ಮಾಡುತ್ತಿದ್ದಾರೆ













