ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಸೇರಿ 26 ಸೋಷಿಯಲ್ ಮೀಡಿಯಾಗಳು ಸ್ಥಗಿತ

(ನ್ಯೂಸ್‌ ಕಡಬ) com,  ಸೆ.06 ಕಠ್ಮಂಡು : ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಸೇರಿದಂತೆ 26 ಸಾಮಾಜಿಕ ಮಾಧ್ಯಮಗಳಿಗೆ ನಿಷೇಧ ವಿಧಿಸಲಾಗಿದೆ.

ನೇಪಾಳದಲ್ಲಿ ಅಧಿಕೃತವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸರ್ಕಾರ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ ವಿಧಿಸಿದೆ.

ಸ್ಥಳೀಯ ಮಟ್ಟದಲ್ಲಿ ನೋಂದಣಿಯಾಗಿರಲಿಲ್ಲ. ಜಾಹೀರಾತುಗಳ ಮೇಲೆ ಸರ್ಕಾರದ ನಿಯಂತ್ರಣ ಇರಲಿಲ್ಲ. ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಸ್ಥಳೀಯ ನೋಂದಣಿವರೆಗೂ ಬಳಕೆಗೆ ತಡೆ ಹಾಕುವಂತೆ ಕೋರ್ಟ್ ನಿರ್ದೇಶಿಸಿತ್ತು.

ಇದರ ಬೆನ್ನಲ್ಲೇ ಸರ್ಕಾರದಿಂದ ದೂರಸಂಪರ್ಕ ಪ್ರಾಧಿಕಾರಕ್ಕೆ ಪತ್ರ ಕಳುಹಿಸಲಾಗಿದೆ. ಈ ಪ್ಲಾಟ್‌ಫಾರ್ಮ್‌ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ಸರ್ಕಾರ ಸೂಚನೆ ನೀಡಿದೆ.

Scroll to Top