ಸೈಮಾ ಪ್ರಶಸ್ತಿ ಪ್ರಕಟ; ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ



(ನ್ಯೂಸ್‌ ಕಡಬ) newskadaba.com ಸೆ.06 : ದುಬೈ: ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2025 (SIIMA 2025) ಕಾರ್ಯಕ್ರಮ ದುಬೈನಲ್ಲಿ ಅದ್ಧೂರಿಯಾಗಿ ನಡೆದಿದೆ. ಕನ್ನಡ ಚಿತ್ರರಂಗದಲ್ಲಿ ಮ್ಯಾಕ್ಸ್ ಸಿನಿಮಾ ನಟನೆಗೆ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದ್ದು, ‘ಯುಐ’ ನಿರ್ದೇಶನಕ್ಕೆ ಉಪೇಂದ್ರ ಅವರಿಗೆ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಸಿಕ್ಕಿದೆ.





ಶುಕ್ರವಾರ ರಾತ್ರಿ ದುಬೈಯಲ್ಲಿ ಸೈಮಾ 2025 ಸಮಾರಂಭ ಆಯೋಜಿಸಲಾಗಿತ್ತು. 2024ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ಪ್ರಶಸ್ತಿ ನೀಡಲಾಗಿದೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಅವರು ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದರು. ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ಇನ್ನು, ‘ಯುಐ’ ನಿರ್ದೇಶನಕ್ಕೆ ಉಪೇಂದ್ರ ಅವರು ಅತ್ಯುತ್ತಮ ನಿರ್ದೇಶಕ ಅವಾರ್ಡ್ ಪಡೆದಿದ್ದಾರೆ.






 

 

error: Content is protected !!
Scroll to Top