ಅಂಗನವಾಡಿ ಕಾರ್ಯಕರ್ತೆ- ಸಹಾಯಕಿಯರ ಹುದ್ದೆ: ಅರ್ಜಿ ಆಹ್ವಾನ



(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 20 ಅಂಗನವಾಡಿ ಕಾರ್ಯಕರ್ತೆ ಹಾಗೂ 58 ಅಂಗನವಾಡಿ ಸಹಾಯಕಿಯರ ಗೌರವ ಸೇವೆಗಳ ಹುದ್ದೆಗೆ ಆನ್‍ ಲೈನ್‍ ನಲ್ಲಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್  https://karnemakaone.kar.nic.in/abcd/  ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಮೊದಲ ಹಂತದಲ್ಲಿ ಆನ್‍ ಲೈನ್ ನಲ್ಲಿ ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಬೇಕು.







ಎರಡನೇ ಹಂತದಲ್ಲಿ ಸಹಿ ಹಾಗೂ ಭಾವಚಿತ್ರವನ್ನು ಅಪ್‍ ಲೋಡ್ ಮಾಡುವುದು ನಂತರ  ಇ-ಸೈನ್ ಹಂತವನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಮೂರನೇ ಹಂತದಲ್ಲಿ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ಅಪ್‍ ಲೋಡ್ ಮಾಡಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಉರ್ವ ಮಾರ್ಕೆಟ್‍ ನಲ್ಲಿರುವ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ ಮಂಗಳೂರು ಗ್ರಾಮಾಂತರ ಕಚೇರಿ (ದೂ.ಸಂ 0824-2263199) ಸಂಪರ್ಕಿಸಬಹುದು ಎಂದು ಮಂಗಳೂರು (ಗ್ರಾ) ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






error: Content is protected !!
Scroll to Top