ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಬ್ಯಾನ್; ಸರ್ಕಾರದ ಕ್ರಮಕ್ಕೆ ಸಾರ್ವಜನಿಕರ ಆಕ್ರೋಶ – News Kadaba

ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಬ್ಯಾನ್; ಸರ್ಕಾರದ ಕ್ರಮಕ್ಕೆ ಸಾರ್ವಜನಿಕರ ಆಕ್ರೋಶ

(ನ್ಯೂಸ್‌ ಕಡಬ) newskadaba.com,  ಸೆ.08 : ಫೇಸ್‌ಬುಕ್, ಯೂಟ್ಯೂಬ್, ಎಕ್ಸ್ ಸೇರಿದಂತೆ 26 ಸಾಮಾಜಿಕ ಮಾಧ್ಯಮಗಳನ್ನು ನಿಷೇಧ ಮಾಡಿದ ಹಿನ್ನೆಲೆ ಸರ್ಕಾರದ ವಿರುದ್ಧ ನೇಪಾಳದ ಜನತೆ ಸಿಡಿದೆದ್ದಿದ್ದು, ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ.

ಪ್ರತಿಭಟನಾಕಾರರು ಬೀದಿಗಿಳಿದಾಗ ಹಿಂಸಾತ್ಮಕ ಘರ್ಷಣೆಗಳು ನಡೆದಿದ್ದು, ಕನಿಷ್ಠ 8 ಮಂದಿ ಮೃತಪಟ್ಟಿದ್ದು, 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಕೋಪಗೊಂಡ ಪ್ರತಿಭಟನಾಕಾರರು ಕರ್ಫ್ಯೂ ನಿರ್ಬಂಧಗಳನ್ನು ಮುರಿದು ಸಂಸತ್ತಿನ ಬಳಿಯ ನಿರ್ಬಂಧಿತ ವಲಯಗಳನ್ನು ಪ್ರವೇಶಿಸಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ, ನೇಪಾಳ ರಾಜಧಾನಿಯಲ್ಲಿ ಸೈನ್ಯವನ್ನು ನಿಯೋಜಿಸಲಾಗಿದೆ.

ಪ್ರತಿಭಟನಾಕಾರರು ಮರದ ಕೊಂಬೆಗಳು ಮತ್ತು ನೀರಿನ ಬಾಟಲಿಗಳನ್ನು ಎಸೆದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ರಬ್ಬರ್ ಗುಂಡು ಸಿಡಿಸಿದರು. ಈ ವೇಳೆ ಕೆಲವು ಪ್ರತಿಭಟನಾಕಾರರು ಸಂಸತ್ತಿನ ಆವರಣವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾದರು, ಇದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿತು.

“ಕರ್ಫ್ಯೂ ಮಧ್ಯಾಹ್ನ 12:30 ರಿಂದ ರಾತ್ರಿ 10:00 ರವರೆಗೆ (ಸ್ಥಳೀಯ ಸಮಯ) ಜಾರಿಯಲ್ಲಿದೆ. ಈ ವಲಯಗಳಲ್ಲಿ ಸಾರ್ವಜನಿಕರ ಓಡಾಟ, ಸಭೆ ಸೇರುವುದು, ಪ್ರತಿಭಟನೆಗಳು ಅಥವಾ ಸುತ್ತುವರಿದ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ” ಎಂದು ಮುಖ್ಯ ಜಿಲ್ಲಾ ಅಧಿಕಾರಿ ಛಬಿಲಾಲ್ ರಿಜಾಲ್ ತಿಳಿಸಿದ್ದಾರೆ.

Scroll to Top