ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಹೆಸರು- ಮುಖ್ಯಮಂತ್ರಿ ಗ್ರೀನ್ ಸಿಗ್ನಲ್

(ನ್ಯೂಸ್‌ ಕಡಬ) newskadaba.com ಸೆ. 09. ನಗರದ ಮೆಟ್ರೋ ನಿಲ್ದಾಣವೊಂದಕ್ಕೆ ಸೇಂಟ್ ಮೇರಿ ಹೆಸರಿಡಬೇಕೆಂದ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಅವರು ಸೋಮವಾರದಂದು ಒಪ್ಪಿಗೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸೆಂಟ್ ಮೇರೀಸ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿನ ಒಂದು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಎಂಬ ಹೆಸರಿಡಬೇಕು ಎಂಬ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಇದಕ್ಕೆ ಅನುಮೋದನೆ ದೊರೆತ ನಂತರ ನಾಮಕರಣ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಹೇಳಿದರು.

Scroll to Top