ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತನ ಬಂಧನ

(ನ್ಯೂಸ್‌ ಕಡಬ) newskadaba.com ಸೆ. 09. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಒಂಟಿ ಮಹಿಳೆಯನ್ನು ಹೊಲಕ್ಕೆ ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಅಪ್ರಾಪ್ತ ವಯಸ್ಕನನ್ನು ಬಂಧಿಸಿದ ಘಟನೆ ನೆಲಮಂಗಲದ ಬೋಳಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.

 

ಸುಮಾರು 17 ವರ್ಷದ ಹುಡುಗ ತನ್ನ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆಯ ಕೈ ಹಿಡಿದು ಹೊಲದ ಒಳಗೆ ಎಳೆದೊಯ್ದಿದ್ದಾನೆ. ಇದೇ ವೇಳೆ ಮಹಿಳೆ, ರಕ್ಷಣೆಗಾಗಿ ತಪ್ಪಿಸಿಕೊಳ್ಳಲು ಕೂಗಿಕೊಂಡಿದ್ದಾಳೆ. ಆಕೆಯ ಚೀರಾಟ ಕೇಳಿದ ಗ್ರಾಮಸ್ಥರು ಮಹಿಳೆಯನ್ನು ರಕ್ಷಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

Scroll to Top