ಎಸಿ ಸ್ಫೋಟ- ಒಂದೇ ಕುಟುಂಬದ ಮೂವರು ಬಲಿ; ಮತ್ತೊರ್ವ ಗಂಭೀರ

(ನ್ಯೂಸ್‌ ಕಡಬ) newskadaba.com ಸೆ. 09. ಕಟ್ಟಡವೊಂದರಲ್ಲಿ ಎಸಿ ಕಂಪ್ರೆಸ್ಸರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಹರಿಯಾಣದ ಫರೀದಾಬಾದ್‌ನಲ್ಲಿ ನಡೆದಿದೆ. ಈ ದುರಂತದಲ್ಲಿ ಅವರ ಸಾಕು ನಾಯಿ ಕೂಡ ಮೃತಪಟ್ಟಿದೆ.

ಮೃತರನ್ನು ಸಚಿನ್ ಕಪೂರ್, ಅವರ ಪತ್ನಿ ರಿಂಕು ಕಪೂರ್ ಮತ್ತು ಅವರ ಮಗಳು ಸುಜನ್ ಕಪೂರ್ ಎಂದು ಗುರುತಿಸಲಾಗಿದೆ. 4 ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಸೋಮವಾರದಂದು  ಮಧ್ಯರಾತ್ರಿ 1:30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು, ಈ ವೇಳೆ ಅವರು ವಾಸವಾಗಿದ್ದ 2ನೇ ಮಹಡಿಯಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಅವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮತ್ತೊಂದು ಕೋಣೆಯಲ್ಲಿ ಸಚಿನ್ ಅವರ ಮಗ ಬಚಾವ್ ಆಗಲು ಕಿಟಕಿಯಿಂದ ಹಾರಿದ್ದಾನೆ. ಆತ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಗಂಭೀರವಾಗಿದೆ.

Scroll to Top