(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‍ಗಳ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ. ಇರಬೇಕು. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 1 ಲಕ್ಷ. ವಿದ್ಯಾರ್ಥಿಗಳು ವೆಬ್‍ಸೈಟ್ https://shp.karnataka.gov.in/bcwd ಮೂಲಕ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 4 ಕೊನೆಯ ದಿನ.
ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಂಖಾತರ ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.













