(ನ್ಯೂಸ್ ಕಡಬ) newskadaba.com, ಸೆ.09: ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಒಂಬತ್ತು ಮಂದಿ ಡ್ರಗ್ಸ್ ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 1.5 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕುಮಾರಸ್ವಾಮಿ ಲೇಔಟ್, ಆವಲಹಳ್ಳಿ, ಅಮೃತಹಳ್ಳಿ, ಹೆಬ್ಬಗೋಡಿ, ಮೈಕೊಲೇಔಟ್ ಹಾಗೂ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು 506 ಗ್ರಾಂ ಎಂಡಿಎಂಎ ಕ್ರಿಸ್ಟಲ್, 50 ಎಲ್ಎಸ್ಡಿ ಸ್ಟ್ರಿಪ್ಸ್ ಗಳು, 85 ಗ್ರಾಂ ಕೊಕೇನ್, 56 ಗ್ರಾಂ ಗಾಂಜಾವನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.












