ರಾಮಕುಂಜ: ಮಲೇರಿಯಾ ವಿರೋಧಿ ಮಾಸಾಚರಣೆ

(ನ್ಯೂಸ್ ಕಡಬ) newskadaba.com ರಾಮಕುಂಜ ಜು.10. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ ದ.ಕ. ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕೊೖಲ, ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ರೆಡ್ ಕ್ರಾಸ್ ಸಂಘ ಇದರ ಸಹಯೋಗದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆಯು ರಾಮಕುಂಜ ಪಂಚಾಯತ್ ಸಭಾಭವನದಲ್ಲಿ ಜರಗಿತು.

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವಿಚಂದ್ರ ಯು ಸ್ವಚ್ಛತೆ, ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಎಂದು ವಿವರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಉಪನ್ಯಾಸಕರಾದ ಗುರುಕಿರಣ್ ಶೆಟ್ಟಿ ಅವರು ಮಲೇರಿಯಾ, ಡೆಂಗ್ಯೂ ರೋಗಗಳು ಹರಡಲು ಮುಖ್ಯ ಕಾರಣ ಮತ್ತು ತಡೆಗಟ್ಟುವ ವಿಧಾನಗಳನ್ನು ತಿಳಿಸಿದರು. ಕೊೖಲ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕರಾಗಿರುವ ರವಿಶಂಕರ್ ಅವರು ರೋಗದ ಗುಣಲಕ್ಷಣಗಳು ಮತ್ತು ತಡೆಗಟ್ಟುವಿಕೆ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳ ಜೊತೆ ಸಂವಾದ ಕಾರ್ಯಕ್ರಮ ನಡೆಯಿತು. ನಂತರ ರಾಮಕುಂಜ ಗ್ರಾಮಪಂಚಾಯತ್ನಿಂದ ಕಾಜರುಕ್ಕಿನವರೆಗೆ ಮಲೇರಿಯಾ ವಿರೋಧಿ ಜಾಥಾ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ರೆಡ್ ಕ್ರಾಸ್ ಘಟಕದ ಸಂಯೋಜಕಿ ಲೀಲಾವತಿ ಯಚ್. ಹಾಗೂ ತಾಲೂಕು ಪಂಚಾಯತ್ ಸದಸ್ಯರಾದ ತಾರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

error: Content is protected !!

Join the Group

Join WhatsApp Group