(ನ್ಯೂಸ್ ಕಡಬ) newskadaba.com, ಸೆ.10 ಬೆಂಗಳೂರು : ಚಿನ್ನದ ದರದಲ್ಲಿ ಬುಧವಾರ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 20 ರೂ. ಏರಿಕೆ ಕಂಡಿದ್ದು, 10,130 ರೂ.ಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 21.90 ರೂ. ಏರಿಕೆ ಕಂಡು ಬಂದಿದ್ದು, 11,051 ರೂ ಆಗಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 81,040 ರೂ. ಬಾಳಿದರೆ, 10 ಗ್ರಾಂಗೆ ನೀವು 1,01,300 ರೂ. ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನ 88,407.20 ರೂ. ಆದರೆ, 10 ಗ್ರಾಂಗೆ ನೀವು 1,10,509 ರೂ. ಹಾಗೂ 100 ಗ್ರಾಂಗೆ 11,05,090 ರೂ. ಪಾವತಿಸಬೇಕಾಗುತ್ತದೆ.
ಬೆಳ್ಳಿ ದರ
ಬೆಂಗಳೂರಿನಲ್ಲಿ ಬೆಳ್ಳಿ ದರದಲ್ಲಿಯೂ ಏರಿಕೆ ಕಂಡು ಬಂದಿದೆ. . ಬೆಳ್ಳಿ 1 ಗ್ರಾಂಗೆ 130 ರೂ. ಇದ್ದು, 8 ಗ್ರಾಂಗೆ 1,040 ರೂ. 10 ಗ್ರಾಂಗೆ 1,300 ರೂ. ಮತ್ತು 1 ಕೆಜಿಗೆ 1,30,000 ಇದೆ.
ಚಿನ್ನಾಭರಣ ಖರೀದಿಸುವ ಮುನ್ನ ಗಮನಿಸಬೇಕಾದ ಅಂಶ
ಶುದ್ಧತೆ: ಚಿನ್ನಾಭರಣ ಖರೀದಿಸುವ ಮುನ್ನ ಅದರ ಶುದ್ಧತೆಯನ್ನು ಪರಿಶೀಲಿಸುವುದು ಅಗತ್ಯ. ಚಿನ್ನದ ಮೇಲೆ ಶುದ್ಧತೆಯನ್ನು ಸೂಚಿಸುವ ಬಿಐಎಸ್ (BIS) ಹಾಲ್‌ಮಾರ್ಕ್ ಇದೆ ಎನ್ನುವುದನ್ನು ಖಚಿತಪಡಿಸಿ. ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂಬುದನ್ನು ಆ ಮೂಲಕ ಪ್ರಮಾಣೀಕರಿಸಬಹುದು.
ಬೆಲೆ: ಚಿನ್ನದ ಬೆಲೆ ಪ್ರತಿ ದಿನ ಬದಲಾಗುತ್ತಿರುತ್ತದೆ. ಖರೀದಿಸುವ ಮುನ್ನ ಬೆಲೆ ಎಷ್ಟಿದೆ ಎನ್ನುವುದನ್ನು ಗಮನಿಸಿ. ಇದಕ್ಕಾಗಿ ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಪರಿಶೀಲಿಸುವುದನ್ನು ಮರೆಯಬೇಡಿ.
ಮೇಕಿಂಗ್ ಚಾರ್ಜಸ್: ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದಿರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲ ಆಭರಣಗಳಿಗೆ ಮೇಕಿಂಗ್, ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಿ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ.













