(ನ್ಯೂಸ್ ಕಡಬ) newskadaba.com ಕಡಬ, ಸೆ. 11. 2025-26ನೇ ಸಾಲಿನ ಪುತ್ತೂರು ಶೈಕ್ಷಣಿಕ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ – ಬಾಲಕಿಯರ ಯೋಗಾಸನ ಸ್ಪರ್ಧೆಯು ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ (ರಿ.) ನರಿಮೊಗರುವಿನಲ್ಲಿ ಆಯೋಜಿಸಲಾಗಿತ್ತು.
ಸಾಂಪ್ರದಾಯಕ ಯೋಗಾಸನ ವಿಭಾಗದಲ್ಲಿ 17 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಸಾನ್ವಿ ದೊಡ್ಡಮನೆ ಪಂಜ ಇವರು ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಹಾಗೂ ಆರ್ಟಿಸ್ಟಿಕ್ ಸಿಂಗಲ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಮತ್ತು ಆರ್ಟಿಸ್ಟಿಕ್ ಪೇರ್ ನಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ 8 ನೇ ವಿದ್ಯಾರ್ಥಿನಿ. ಗುರುಗಳಾದ ಸಂತೋಷ್ ಮುಂಡಕಜೆ ಹಾಗೂ ಪ್ರಶ್ವಿಜಾ ಸಂತೋಷ್ ಯೋಗೇನ ಚಿತ್ತಸ್ಯ ಯೋಗ ಕೇಂದ್ರ ಸುಳ್ಯದಲ್ಲಿ ಯೋಗಾಭ್ಯಾಸವನ್ನು ಪಡೆಯುತ್ತಿದ್ದಾರೆ. ಇವರು ಕಡಬ ಶ್ರೀ ಮುಕಾಂಬಿಕಾ ಮಾರುತಿ ಆಟೋ ವರ್ಕ್ಸ್ ನಾ ಮಾಲ್ಹಕರಾದ ನಿತ್ಯಾನಂದ ಹಾಗೂ ಸೀತಾಲಕ್ಷ್ಮಿ ದಂಪತಿ ಪುತ್ರಿ.








