ಬಿ.ಸಿ.ರೋಡ್: ಬ್ಯಾಂಕ್‌ಗೆ ದಾಳಿ ನಡೆಸಿದ ಚುನಾವಣಾ ಆಯೋಗದ ಅಧಿಕಾರಿಗಳು ► ಲಕ್ಷಾಂತರ ಮೌಲ್ಯದ ಸೀರೆಗಳು ವಶಕ್ಕೆ

(ನ್ಯೂಸ್ ಕಡಬ) newskadaba.com
ಬಂಟ್ವಾಳ, ಎ.19. ಇಲ್ಲಿನ ಬ್ಯಾಂಕೊಂದರಲ್ಲಿ ಅಕ್ರಮವಾಗಿ ಸೀರೆಗಳನ್ನು ದಾಸ್ತಾನು ಮಾಡಲಾಗಿದೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ಚುನಾವಣಾ ಅಧಿಕಾರಿಗಳು ಈ ದಾಳಿ ನಡೆಸಿ, ಬ್ಯಾಂಕಿನ ಕೋಣೆಯೊಂದರಲ್ಲಿ ಏಳು ಚೀಲಗಳಲ್ಲಿ ತುಂಬಿಸಿಟ್ಟಿದ್ದ ಸುಮಾರು 1,222 ಸೀರೆಗಳನ್ನು ವಶಪಡಿಸಿಕೊಂಡ ಘಟನೆ ಗುರುವಾರದಂದು ನಡೆದಿದೆ.

ನವೋದಯ ಸ್ವಸಹಾಯ ಗುಂಪಿನ ಸದಸ್ಯರಿಗೆ ವಿತರಣೆಗಾಗಿ ತಂದಿಟ್ಟಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ ಸೀರೆಗಳನ್ನು ಬಿ.ಸಿ.ರೋಡ್ ಶಾಖೆಗೆ ತಂದ ದಿನವೇ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ವಿತರಿಸದೆ ದಾಸ್ತಾನು ಮಾಡಲಾಗಿತ್ತು ಎನ್ನಲಾಗಿದೆ. ಆದರೆ ಬ್ಯಾಂಕಿನಲ್ಲಿ ಸೀರೆಗಳನ್ನು ದಾಸ್ತಾನು ಮಾಡಲಾಗಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ದಾಳಿ ನಡೆಸಿ ದಾಸ್ತಾನು ಮಾಡಲಾಗಿದ್ದ ಸೀರೆಗಳನ್ನು ವಶಪಡಿಸಿಕೊಂಡಿದ್ದು, ಬಂಟ್ವಾಳ ನಗರ ಠಾಣೆಯ ಪೊಲೀಸರ ಸಹಕಾರದೊಂದಿಗೆ ತನಿಖೆಯನ್ನು ಮುಂದುವರಿಸಿದ್ದಾರೆ.

Also Read  ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ

error: Content is protected !!
Scroll to Top