(ನ್ಯೂಸ್ ಕಡಬ) newskadaba.com ಪುತ್ತೂರು, ಎ.20. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಸಂಜೀವ ಮಠಂದೂರುರವರು ಗುರುವಾರದಂದು ಪೇಜಾವರ ಸ್ವಾಮಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಗುರುವಾರದಂದು ಉಡುಪಿಯ ಪೇಜಾವರ ಮಠಕ್ಕೆ ತೆರಳಿ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರನ್ನು ಮಠದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಮೊದಲಾದವರು ಉಪಸ್ಥಿತರಿದ್ದರು.