ಹಾಸನ : ಗಣೇಶ ಮೆರವಣಿಗೆ ವೇಳೆ ಟ್ರಕ್ ದುರಂತ – ಪ್ರಧಾನಿ ನರೇಂದ್ರ ಮೋದಿ ಸಂತಾಪ



(ನ್ಯೂಸ್‌ ಕಡಬ) newskadaba.com, ಸೆ.13 ನವದೆಹಲಿ : ಹಾಸನದಲ್ಲಿ ಗಣೇಶ ಮೆರವಣಿಗೆ ಸಮಯದಲ್ಲಿ ಸಂಭವಿಸಿದ ಟ್ರಕ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.







ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಮೋದಿ ಕಚೇರಿ, “ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಸಂಭವಿಸಿರುವುದು ನಿಜಕ್ಕೂ ಹೃದಯವಿದ್ರಾವಕ ಘಟನೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅವರ ಬಗ್ಗೆ ಕನಿಕರವಿದೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪಾರ್ಥಿಸುತ್ತೇನೆ” ಎಂದು ತಿಳಿಸಿದೆ.






ಜೊತೆಗೆ ಮೃತರ ಕುಟುಂಬಸ್ಥರಿಗಾಗಿ ಪಿಎಂಎನ್‌ಆರ್‌ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಹಣವನ್ನು ಘೋಷಿಸಲಾಗಿದೆ

error: Content is protected !!
Scroll to Top