ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಸೆ.15ರಂದು ಜೀ಼ಕನ್ನಡ – ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಕಾಮಿಡಿ ಕಿಲಾಡಿಗಳು ಮಹಾ ಆಡಿಷನ್ – News Kadaba

ಮಂಗಳೂರು: ಸೆ.15ರಂದು ಜೀ಼ಕನ್ನಡ – ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಕಾಮಿಡಿ ಕಿಲಾಡಿಗಳು ಮಹಾ ಆಡಿಷನ್

(ನ್ಯೂಸ್‌ ಕಡಬ) newskadaba.com,  ಸೆ.13 ಮಂಗಳೂರು: ಪ್ರತಿಭೆಗಳನ್ನು ಗುರುತಿಸುವಲ್ಲಿ ನಂ.1 ಚಾನೆಲ್ ಆದ ಜೀ಼ ಕನ್ನಡ ವಾಹಿನಿ ಈಗ ಮತ್ತೊಮ್ಮೆ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಆಡಿಷನ್ 31 ಜಿಲ್ಲೆಗಳಲ್ಲಿ ನಡೆಯಲಿದೆ.

ಪ್ರತಿಭೆ ಇದ್ದರೂ ಅವಕಾಶ ಸಿಗದೇ ಇರುವವವರಿಗೆ ಜೀ಼ಕನ್ನಡ ಒಂದು ಅತ್ಯುತ್ತಮ ವೇದಿಕೆ ಕಲ್ಪಿಸಿಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಭಾಗವಹಿಸುವವರ ವಯಸ್ಸು 6 ರಿಂದ 60 ರವರೆಗೆ ಇರಬೇಕು ಮತ್ತು ನೀವು ಉತ್ತಮವಾಗಿ ಡ್ಯಾನ್ಸ್ ಮಾಡುವವರಾಗಿರಬೇಕು. ಇನ್ನು, ಕಾಮಿಡಿ ಕಿಲಾಡಿಗಳಲ್ಲಿ ಭಾಗವಹಿಸುವುದಾದರೆ ನಿಮ್ಮ ವಯಸ್ಸು 16 ರಿಂದ 60 ವರುಷದ ಒಳಗಿರಬೇಕು ಮತ್ತು ನಿಮ್ಮದೇ ಕಾಮಿಡಿ ಸ್ಕಿಟ್ ಇರಬೇಕು.

ರೀಲ್ಸ್ ವಿಡಿಯೋಗಳಿಗೆ ಯಾವುದೇ ಅವಕಾಶವಿಲ್ಲ. ಸೆಪ್ಟೆಂಬರ್ 15 (ಸೋಮವಾರ)ರಂದು ಬೆಳಗ್ಗೆ 9 ಗಂಟೆಗೆ, ಮಂಗಳೂರಿನ ಕೊಡಿಯಾಲಬೈಲ್ ನ ಶಾರದ ವಿದ್ಯಾಲಯ(ಕೇಂದ್ರ ಪಠ್ಯಕ್ರಮ ಆಧಾರಿತ)ದಲ್ಲಿ ಆಡಿಷನ್ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಷ್ಟಪಡುವವರು ಪಾಸ್ಪೋರ್ಟ್ ಸೈಜ್ ಪೋಟೋ ಹಾಗೂ ಅಡ್ರೆಸ್ ಪ್ರೂಪ್ ಜೆರಾಕ್ಸ್ ಜೊತೆಗೆ ಬನ್ನಿ.

ಜೀ಼ಕನ್ನಡ ವಾಹಿನಿಯಲ್ಲಿ ಆಡಿಷನ್ ಗಳಿಗೆ ಯಾವುದೇ ಶುಲ್ಕ ಕಟ್ಟುವಂತಿಲ್ಲ. ವಾಹಿನಿಯ ಹೆಸರಿನಲ್ಲಿ ಹಣ ಪಡೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಾಹಿನಿಯು ತಿಳಿಸಿದೆ.

Scroll to Top