ಟ್ರ್ಯಾಕ್ಟರ್‌ ಅನ್ನು ಲಾರಿಯಿಂದ ಇಳಿಸುವಾಗ ಮೈಮೇಲೆ ಬಿದ್ದು ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.13 ಧಾರವಾಡ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿಮೇಳದ ಮೊದಲ‌ ದಿನವೇ ದುರಂತವೊಂದು ಸಂಭವಿಸಿದೆ‌. ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ಮೈಮೇಲೆ ಬಿದ್ದು ಯುವಕ ಮೃತಪಟ್ಟಿದ್ದಾನೆ.

ತುಮಕೂರು ಮೂಲದ ಪರಶುರಾಮ (32) ಮೃತ.

ಶನಿವಾರದಿಂದ ನಡೆಯುವ ಕೃಷಿ ಮೇಳದ ಪ್ರದರ್ಶನಕ್ಕೆ ಪರಶುರಾಮ ಟ್ರ್ಯಾಕ್ಟರ್ ತಂದಿದ್ದ. ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ನಿಯಂತ್ರಣ ತಪ್ಪಿ ಪರಶುರಾಮನ ಮೈಮೇಲೆ ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Scroll to Top