ವಿಜಯಲಕ್ಷ್ಮೀ ದರ್ಶನ್ ಮನೆಯಲ್ಲಿ ಕಳ್ಳತನ; ದೂರು ದಾಖಲು, ಅವರ ಮೇಲೆಯೇ ಅನುಮಾನ!

(ನ್ಯೂಸ್‌ ಕಡಬ) newskadaba.com,  ಸೆ.13 : ಜೈಲಿನಲ್ಲಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿವಾಸದಲ್ಲಿ ಕಳ್ಳತನವಾಗಿದೆ. ಈ ಸಂಬಂಧ ವಿಜಯಲಕ್ಷ್ಮೀ ದರ್ಶನ್ ಅವರ ಮ್ಯಾನೇಜರ್ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಹಿನ್ನಲೆ CK ಅಚ್ಚುಕಟ್ಟು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮನೆಕೆಲಸದವರ ಮೇಲೆ ಶಂಕೆ ವ್ಯಕ್ತಪಡಿಸಿ ಮ್ಯಾನೇಜರ್ ನಾಗರಾಜ್ ಈ ದೂರನ್ನು ದಾಖಲಿಸಿದ್ದಾರೆ. ದೂರಿನಲ್ಲಿ 3 ಲಕ್ಷ ರೂಪಾಯಿ ಕಳ್ಳತನವಾಗಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸೆಪ್ಟೆಂಬರ್ 4ರಂದು ಕೆಲಸದ ನಿಮಿತ್ ವಿಜಯಲಕ್ಷ್ಮೀ ದರ್ಶನ್ ಮೈಸೂರಿಗೆ ತೆರಳಿದ್ದರು. ಮೈಸೂರಿಗೆ ತೆರಳುವ ಮುನ್ನ ಮನೆಯ ವಾಡ್ರೂಬ್ ಕಾಟನ್ ಬಾಕ್ಸ್ ನಲ್ಲಿ ಹಣ ತೆಗೆದುಕೊಡಲು ಮ್ಯಾನೇಜರ್‌ಗೆ ಹೇಳಿದ್ದರು. ಅದರಲ್ಲಿನ ಸ್ವಲ್ಪ ಹಣ ತೆಗೆದು ಉಳಿದ ಹಣವನ್ನು ವಾಡ್ರೂಬ್ ಕಾಟನ್ ಬಾಕ್ಸ್ ನಲ್ಲಿಯೇ ಮ್ಯಾನೇಜರ್ ಇರಿಸಿದ್ದರು. ನಂತರ ಮನೆ ಬೀಗವನ್ನು ತಾಯಿಗೆ ನೀಡಿದ್ದ ವಿಜಯಲಕ್ಷ್ಮೀ ಅವರ ಮ್ಯಾನೇಜರ್ ಹೊರಗಡೆ ತೆರಳಿದ್ದರು.

Scroll to Top