(ನ್ಯೂಸ್ ಕಡಬ) newskadaba.com, ಸೆ.15 ಬ್ಯಾಂಕಾಕ್ : ಸಫಾರಿ ಜೀಪ್‌ನಿಂದ ಇಳಿದ ಸಿಬ್ಬಂದಿಯನ್ನೇ ಸಿಂಹಗಳ ಗುಂಪು ಎಳೆದೊಯ್ದು ಕೊಂದು ತಿಂದು ಹಾಕಿದ ದಾರುಣ ಘಟನೆ ಥಾಯ್ಲೆಂಡ್‌ನ ಮೃಗಾಲಯದಲ್ಲಿ ನಡೆದಿದೆ..
ಬ್ಯಾಂಕಾಕ್‌ನಲ್ಲಿರುವ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾದ ಸಫಾರಿ ವರ್ಲ್ಡ್ ಮೃಗಾಲಯದಲ್ಲಿ ಈ ಭಯಾನಕ ಘಟನೆ ನಡೆದಿರುತ್ತದೆ . ಮೃಗಾಲಯಕ್ಕೆ ಭೇಟಿ ನೀಡಿದ ಪ್ರವಾಸಿಗರ ಎದುರೇ ಸಿಂಹಗಳ ಗುಂಪೊಂದು ಮೃಗಾಲಯದ ಸಿಬ್ಬಂದಿ ಜಿಯಾನ್ ರಂಗ್ಖರಸಾಮೀ ಎಂಬುವವರ ಮೇಲೆ ಸಿಂಹಗಳ ಹಿಂಡೊಂದು ದಾಳಿ ನಡೆಸಿ ಕೊಂದು ಹಾಕಿದೆ.
ಈ ಭೀಕರ ಘಟನೆ ನೂರಾರು ಪ್ರವಾಸಿಗರ ಎದುರು ಸುಮಾರು 15 ನಿಮಿಷಗಳ ಕಾಲ ನಡೆದಿದೆ. ಅಲ್ಲದೆ ಕೆಲವರು ತಮ್ಮ ಮೊಬೈಲ್‌ನಲ್ಲಿ ಈ ಭೀಕರ ವೀಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಈ ಕುರಿತು ಆಘಾತ ವ್ಯಕ್ತಪಡಿಸಿರುವ ಸಫಾರಿ ವರ್ಲ್ಡ್ ಆಡಳಿತ ಮಂಡಳಿ ಮೃತ ಸಿಬ್ಬಂದಿಯ ಕುಟುಂಬಕ್ಕೆ ಸಂತಾಪ ಸೂಚಿಸಿದೆ. ಅಲ್ಲದೆ ಮೃಗಾಲಯದಲ್ಲಿನ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸುವುದಾಗಿ ಹೇಳಿದೆ














