ಮೈಸೂರು ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ ಅರ್ಜಿಗಳ ವಜಾ



(ನ್ಯೂಸ್ಕಡಬ) newskadaba.com,  ಸೆ.15  ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಸಲ್ಲಿಸಲಾದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಬಾನು ಮುಷ್ತಾಕ್‌ ಆಯ್ಕೆಯಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಎಂದು ಮಾಜಿ ಸಂಸದ ಪ್ರತಾಪ್​ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್‌ ಎಂಬವರು ಪಿಐಎಲ್‌ ಸಲ್ಲಿಸಿದ್ದರು.







ಹೈಕೋರ್ಟ್ ಮುಖ್ಯ ನ್ಯಾ. ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು, ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡುವ ಸಂಪ್ರದಾಯವಿದೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರ ಆಯ್ಕೆ ಮಾಡಿದ್ದು ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಹೀಗಾಗಿ ಬಾನು ಮುಷ್ತಾಕ್‌ರಿಗೆ ನೀಡಿದ ಆಹ್ವಾನ ಹಿಂಪಡೆಯಲು ನಿರ್ದೇಶನ ನೀಡಬೇಕು ಅನ್ನೋದು ಅರ್ಜಿದಾರರ ಮನವಿ ಆಗಿತ್ತು.






ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು, ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡುವ ಸಂಪ್ರದಾಯವಿದೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಭಾನು ಮುಷ್ತಾಕ್ ಅವರ ಆಯ್ಕೆ ಮಾಡಿದ್ದು ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ವಾದ ಆಲಿಸಿದ ನ್ಯಾಯಪೀಠ, ಈ ಅರ್ಜಿಗಳ ಮುಂದಿನ ವಿಚಾರಣೆ ಅಗತ್ಯವಿಲ್ಲ ಎಂದು ತೀರ್ಮಾನಿಸಿ ತೀರ್ಪು ನೀಡಿದೆ.

.

error: Content is protected !!
Scroll to Top