ಸರ್ಕಾರದಿಂದ ಎಡವಟ್ಟು: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ನಿರ್ದೇಶಕಿ ಅಮಾನತು!



(ನ್ಯೂಸ್‌ ಕಡಬ) newskadaba.com,  ಸೆ.16 ಬೆಂಗಳೂರು : ಹಲವು ವರ್ಷಗಳಿಂದ ನಿಗಮದ ನಿಧಿಯಲ್ಲಿ ಸಂಗ್ರಹವಾಗಿದ್ದ 101 ಕೋಟಿ ರೂ.ಗಳನ್ನು ರಾಜ್ಯ ಹಣಕಾಸು ಇಲಾಖೆಗೆ ಒಪ್ಪಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ತನ್ನ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಪುಷ್ಪಲತಾ ಎಚ್ ಅವರನ್ನು ಅಮಾನತುಗೊಳಿಸಿದೆ.







ಆಕೆ ಕರ್ತವ್ಯ ಲೋಪ ಎಸಗಿಲ್ಲ ಎಂದು ಕಂಡುಕೊಂಡ ನಂತರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಲ್ಲಿ (ಕೆಎಸ್‌ಟಿಡಿಸಿ) ಮುಖ್ಯ ವ್ಯವಸ್ಥಾಪಕಿಯಾಗಿ ಸೇವೆ ಸಲ್ಲಿಸುತ್ತಿರುವ ಕೆಎಎಸ್ ಅಧಿಕಾರಿ ಪುಷ್ಪಲತಾ ಎಚ್ ಅವರನ್ನು ಅಮಾನತುಗೊಳಿಸುವ ಸರ್ಕಾರದ ಕ್ರಮವನ್ನು ಹಣಕಾಸು ಇಲಾಖೆಯು ರದ್ದುಗೊಳಿಸಿದೆ.






ಪುಷ್ಪಲತಾ ಜೊತೆ ಅಮಾನತುಗೊಂಡ ಇತರ ಇಬ್ಬರು ಅಧಿಕಾರಿಗಳಾದ ಜಿ ಇಂದಿರಮ್ಮ ಮತ್ತು ಪುಷ್ಪಲತಾ ಕೆಎಸ್, ಕರ್ನಾಟಕ ಆಡಳಿತ ನ್ಯಾಯಮಂಡಳಿಯಿಂದ (ಕೆಎಟಿ) ತಡೆಯಾಜ್ಞೆ ಪಡೆದಿದ್ದಾರೆ. ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮ ಲಿಮಿಟೆಡ್ (ಕೆಎಂವಿಎಸ್‌ಟಿಡಿಎಲ್) ನಲ್ಲಿ ನಡೆದ 187 ಕೋಟಿ ರೂ. ಹಗರಣದಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ನೀಡಿದ್ದಾರೆ. ಲಂಚ ಆರೋಪದ ಮೇಲೆ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಇತ್ತೀಚೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ವಿವಿಧ ಭ್ರಷ್ಟಾಚಾರ ಆರೋಪಗಳಿಂದ ಮುಳುಗೇಳುತ್ತಿರುವ ಸರ್ಕಾರಕ್ಕೆ ಇದು ಮತ್ತೊದು ಎಡವಟ್ಟದಂತಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸೂಚನೆಯ ಮೇರೆಗೆ ಅಮಾನತು ನಾಟಕ ಪ್ರಾರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

error: Content is protected !!
Scroll to Top