ನವದೆಹಲಿ : ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಖ್ಯಾತ ನಟ ಮೋಹನ್ ಲಾಲ್‌ಗೆ ಘೋಷಣೆ



(ನ್ಯೂಸ್‌ ಕಡಬ) newskadaba.com,  ಸೆ.22 ನವದೆಹಲಿ: ಮಲಯಾಳಂನ ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸೆ.23 ರಂದು ನಡೆಯಲಿರುವ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೋಹನ್ ಲಾಲ್‌ಗೆ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಘೋಷಿಸಿದೆ.





ನಟ ಮೋಹನ್ ಲಾಲ್, ಮಲಯಾಳಂ ಮಾತ್ರವೇ ಅಲ್ಲದೆ ಭಾರತದ ಹಲವಾರು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ಫಾಲ್ಕೆ ಪ್ರಶಸ್ತಿ ಗೌರವಕ್ಕೆ ಭಾಜನರಾದ ಮಲಯಾಳಂ ಚಿತ್ರರಂಗದ 2ನೇ ಕಲಾವಿದರು ಮೋಹನ್ ಲಾಲ್. 2004ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಮಲಯಾಳಂ ಚಿತ್ರರಂಗದ ಜನಪ್ರಿಯ ನಿರ್ದೇಶಕ ಅಡೂರು ಗೋಪಾಲಕೃಷ್ಣನ್ ಅವರಿಗೆ ನೀಡಲಾಗಿತ್ತು. ಮೋಹನ್ ಲಾಲ್ ಸಿನಿಮಾ ರಂಗಕ್ಕೆ ಸಲ್ಲಿಸಿರುವ ಅಭೂತಪೂರ್ವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.






1984ರಲ್ಲಿ ಮೊದಲ ಬಾರಿ ನಾಯಕನಾಗಿ ನಟಿಸಿದರು. ಆ ಸಿನಿಮಾ ಹಿಟ್ ಆಗುವ ಮೂಲಕ ಮೋಹನ್‌ ಲಾಲ್ ನಾಯಕನಾಗಿಯೇ ಮುಂದುವರೆದರು. 1980 ರಿಂದ ಈ ವರೆಗೆ ಮೋಹನ್ ಲಾಲ್ ಅವರು 400 ಸಿನಿಮಾಗಳಲ್ಲಿ ನಟಿಸಿದ್ದಾರೆ. 1986ರಲ್ಲಿ ಒಂದೇ ವರ್ಷದಲ್ಲಿ 36 ಸಿನಿಮಾಗಳಲ್ಲಿ ಮೋಹನ್ ಲಾಲ್ ನಟಿಸಿದ್ದರು.

error: Content is protected !!
Scroll to Top