ಕಲ್ಲಡ್ಕ: ಬೈಕ್ ಅಪಘಾತ ► ಸವಾರ ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.06. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕೆ.ಸಿ.ರೋಡ್ ಎಂಬಲ್ಲಿ ಸ್ಕಾರ್ಪಿಯೋ ಕಾರೋದು ಬೈಕಿಗೆ ಢಿಕ್ಕಿ ಹೊಡೆದುದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.





ಕೆಎ.19.ಇವಿ.497 ಸಂಖ್ಯೆಯ ಬಜಾಜ್ ಪಲ್ಸರ್ ಬೈಕ್ ಗೆ ಸ್ಕಾರ್ಪಿಯೋ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಬೈಕ್ ಸವಾರನನ್ನು ನಂದರಬೆಟ್ಟು ನಿವಾಸಿ ಉವೈಸ್ (21) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top