(ನ್ಯೂಸ್ ಕಡಬ) newskadaba.com, ಸೆ.24 ಜೈಪುರ : ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಕಾಡಿನಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿದ್ದು, ಮಗುವಿನ ತುಟಿಗಳನ್ನು ಗಮ್ ಹಾಕಿ ಅಂಟಿಸಿ ವಿಕೃತಿ ಮೆರೆಯಲಾಗಿತ್ತು. ಮಗುವನ್ನು ಕಂಡ ದನಗಾಹಿಯೊಬ್ಬ ರಕ್ಷಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾನೆ. ಮಗುವಿನ ಬಾಯಿಗೆ ಹಾಕಿದ್ದ ಗಮ್ ತೆಗೆದು ನೋಡಿದಾಗ ಬಾಯೊಳಗೆ ಕಲ್ಲನ್ನು ಹಾಕಲಾಗಿತ್ತು ಎಂದು ತಿಳಿದು ಬಂದಿದೆ. ಕೂಡಲೇ ಶಿಶುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುವನ್ನು ಕೊಲ್ಲಲು ಈ ರೀತಿ ಮಾಡಲಾಗಿತ್ತು ಎಂದು ತಿಳಿದು ಬಂದಿದೆ.
ಭಿಲ್ವಾರದ ಮಂಡಲಗಢ ವಿಧಾನಸಭಾ ಕ್ಷೇತ್ರದ ಬಿಜೋಲಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ. ಸೀತಾ ಕುಂಡ್ ದೇವಾಲಯದ ಮುಂಭಾಗದ ರಸ್ತೆಯ ಪಕ್ಕದ ಕಾಡಿನಲ್ಲಿ ಮಗು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ..ಪ್ರತ್ಯೇಕ ಘಟನೆಯಲ್ಲಿ, ಹೆಣ್ಣು ಮಗು ಹುಟ್ಟಿದ್ದಕ್ಕೆ ಹೆತ್ತ ತಾಯಿಯೇ 2 ತಿಂಗಳ ಹಸುಗೂಸು ಕಾಲುವೆಗೆ ಎಸೆದು ಕೊಲೆ ಮಾಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ ನಲ್ಲಿ ನಡೆದಿದೆ.
ಪ್ರಿಯಾಂಕಾ ದೇವಿ- ಸರೋಜ್ ಕುಮಾರ್ ದಂಪತಿಗೆ ಮೊದಲು ಇಬ್ಬರು ಹೆಣ್ಣು ಮಕ್ಕಳು ಜನಿಸಿದ್ದರು. ಮೂರನೇ ಹೆಣ್ಣು ಮಗು ಜನಿಸಿ ಎರಡು ತಿಂಗಳಾಗಿತ್ತು. ಮೂರನೆಯದ್ದೂ ಹೆಣ್ಣು ಮಗು ಆದ ಕಾರಣ ಪ್ರಿಯಾಂಕಾ ದೇವಿಯೇ ಮಗುವನ್ನು ಕಾಲುವೆಗೆ ಎಸೆದು ಕೊಲೆ ಮಾಡಿದ್ದಾಳೆ. ಆ ಬಳಿಕ ಮಗು ಇಲ್ಲ ಎಂದು ಗೋಳಾಡಿದ್ದಳು.













