ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ; ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು – News Kadaba

ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ; ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com,  ಸೆ.24 ನವದೆಹಲಿ : ರಾಜ್ಯದ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ ಹಬ್ಬದಲ್ಲಿ ಸಿಹಿ ಸುದ್ದಿ ನೀಡಿದೆ. ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರ ಪ್ರಾರಂಭಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಪ್ರಯತ್ನದ ಫಲವಾಗಿ ʼಹುಬ್ಬಳ್ಳಿ To ಕೊಲ್ಲಂʼ ವರೆಗೆ 22 ಕೋಚ್‌ಗಳುಳ್ಳ ವಿಶೇಷ ರೈಲು ಸಂಚಾರಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಇದೇ ಸೆಪ್ಟೆಂಬರ್‌ 28 ರಿಂದ ಸಂಚಾರ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದ ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಬೆಂಗಳೂರು ಮಾರ್ಗವಾಗಿ ಹಾಗೂ ಕೃಷ್ಣರಾಜಪುರಂ, ಬಂಗಾರಪೇಟ್, ಸೇಲಂ, ಇರೋಡ್‌, ತಿರುಪುರ, ಪೊದನೂರ, ತ್ರಿಸ್ಸೂರ, ಅಲುವಾ, ಎರ್ನಾಕುಲಂ ಟೌಣ್‌, ಕೊಟ್ಟಯಾಂ, ಚಂಗನಸ್ಸೇರಿ, ತಿರುವಳ್ಳಾ, ಚೆಂಗನ್ನೂರ್‌, ಕರುನಾಗಪಲ್ಲಿ, ಸಸ್ಥನಕೊಟ್ಟಾ ಮಾರ್ಗದಲ್ಲಿ ಈ ವಿಶೇಷ ರೈಲು ಸಂಚರಿಸಲಿದೆ.

ಉತ್ತರ ಕರ್ನಾಟಕದ ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಕೊಲ್ಲಂ ಮಧ್ಯೆ ಪ್ರತಿ ಭಾನುವಾರ ಮತ್ತು ಸೋಮವಾರ ಈ ವಿಶೇಷ ಎಕ್ಸ್‌ಪ್ರೆಸ್‌ ರೈಲು ಒಟ್ಟು 14 ವಾರ ಸಂಚರಿಸಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ರೈಲು ಸಂಖ್ಯೆ 07313 ಸೆ.28ರಿಂದ ಪ್ರತಿ ಭಾನುವಾರ ಮಧ್ಯಾಹ್ನ 3.15ಕ್ಕೆ ಹುಬ್ಬಳ್ಳಿಯಿಂದ ಸಂಚರಿಸಲಿದ್ದರೆ, ರೈಲು ಸಂಖ್ಯೆ 07314 ಸೆ.29 ರಿಂದ ಪ್ರತಿ ಸೋಮವಾರ ಸಂಜೆ 5 ಗಂಟೆಗೆ ಕೊಲ್ಲಂನಿಂದ ಸಂಚಾರ ಆರಂಭಿಸಲಿದೆ.

ದಸರಾ ಹಬ್ಬದ ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸೇರಿದಂತೆ, ರಾಜ್ಯದಿಂದ ಸಂಚರಿಸುವ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರ ವ್ಯವಸ್ಥೆಗಾಗಿ ಭಾರತೀಯ ಅಯ್ಯಪ್ಪ ಸೇವಾ ಸಂಘ, ಸಚಿವ ಪ್ರಲ್ಹಾದ್‌ ಜೋಶಿ ಅವರಿಗೆ ಮನವಿ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಜೋಶಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಮತ್ತು ರಾಜ್ಯ ಸಚಿವ ವಿ. ಸೋಮಣ್ಣ ಅವರ ಗಮನ ಸೆಳೆದು ವಿಶೇಷ ರೈಲು ಸಂಚಾರ ಸೇವೆ ಕಲ್ಪಿಸಿದ್ದಾರೆ.

Scroll to Top