(ನ್ಯೂಸ್ ಕಡಬ) newskadaba.com, ಸೆ.24 ಬೆಂಗಳೂರು: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಇಂದು ನಿಧನರಾದರು.
ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು. ಗೃಹ ಭಂಗ ಕಾದಂಬರಿ ಧಾರಾವಾಹಿಯಾಗಿದ್ದರೆ, ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ ಕಾದಂಬರಿಗಳು ಸಿನಿಮಾಗಳಾಗಿವೆ. ಇಂದಿಗೂ ಕೂಡ ಎಸ್ಎಲ್ ಭೈರಪ್ಪನವರ ಕೃತಿಗಳು ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿವೆ.
ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಎಸ್ಎಲ್ ಭೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ.













