(ನ್ಯೂಸ್ ಕಡಬ) newskadaba.com, ಸೆ.25 ಬೆಂಗಳೂರು: ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಮುಂದಿನ ಮೂರು ದಿನ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಕರಾವಳಿಯಲ್ಲಿ ಸೆ.25 ರಿಂದ 27ರವರೆಗೆ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 21°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆ. 25ರಂದು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸೆ.26ರಂದು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಹಾಗೆಯೇ ಸೆ.27ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸೆ.28ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸೆ. 29 ಮತ್ತು 30ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೂಡ ತಿಳಿದು ಬಂದಿದೆ.













