ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ ವಂಚನೆ: ದೈಹಿಕ ಶಿಕ್ಷಕನ ವಿರುದ್ಧ ದೂರು ದಾಖಲು – News Kadaba

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ ವಂಚನೆ: ದೈಹಿಕ ಶಿಕ್ಷಕನ ವಿರುದ್ಧ ದೂರು ದಾಖಲು

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು: ಮದುವೆ ಆಗುವುದಾಗಿ ನಂಬಿಸಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂದು ಆರೋಪಿಸಿ ಖಾಸಗಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನೊಬ್ಬನ ಮೇಲೆ ಕೋಣನಕುಂಟೆ ಪೊಲೀಸ್ ಠಾಣೆಗೆ ಆತನ ಸ್ನೇಹಿತೆ ದೂರು ನೀಡಿದ್ದಾರೆ.ಕೇರಳ ಮೂಲದ ಅಬೇ ವಿ ಮ್ಯಾಥ್ಯು ವಿರುದ್ಧ ಆರೋಪ ಕೇಳಿ ಬಂದಿದೆ. ಈತ ಖಾಸಗಿ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕನಾಗಿ ಹಾಗೂ ಕ್ರಿಕೆಟ್ ತರಬೇತುದಾರನಾಗಿದ್ದಾನೆಂದು ತಿಳಿದುಬಂದಿದೆ.

ಸಂತ್ರಸ್ತೆ ರಾಜ್ಯ ಮಹಿಳಾ ಆಯೋಗಕ್ಕೆ ಸೆ.22ರಂದು ದೂರು ನೀಡಿದ್ದಾರೆ, ಆ ದೂರಿನ ಪ್ರತಿಯನ್ನು ನೈಋತ್ಯ ವಿಭಾಗದ ಡಿಸಿಪಿ ಅವರಿಗೆ ಆಯೋಗದ ಅಧಿಕಾರಿಗಳು ಕಳುಹಿಸಿ, ತನಿಖೆ ನಡೆಸುವಂತೆ ಸೂಚಿಸಿದ್ದರು.ಆಯೋಗದ ಸೂಚನೆ ಮೇರೆಗೆ ಸಂತ್ರಸ್ತೆಯನ್ನು ಸಂಪರ್ಕಿಸಿದ ಕೋಣನಕುಂಟೆ ಠಾಣೆ ಪೊಲೀಸರು, ಆಕೆ ನೀಡಿದ ಎಫ್ಐಆರ್‌ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

10 ವರ್ಷದ ಮಗಳ ದಾಖಲಾತಿಗಾಗಿ ಶಾಲೆಗೆ ಹೋಗಿದ್ದಾಗ ಆರೋಪಿಯನ್ನು ಭೇಟಿಯಾಗಿದ್ದೆ. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು. ಬಳಿಕ ಆರೋಪಿ ಆರ್ಥಿಕ ಸಹಾಯ ಮಾಡುವ ಮೂಲಕ ವಿಶ್ವಾಸ ಗಳಿಸಿದ್ದ. ಬಳಿಕ ಇಬ್ಬರೂ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಒಟ್ಟಿಗೆ ವಾಸಿಸಲು ಪ್ರಾರಂಭಿಸಿದ್ದೆವು. ಈ ವೇಳೆ ಮದುವೆಯಾಗುವುದಾಗಿ ನಂಬಿಸಿದ್ದ ಮ್ಯಾಥ್ಯೂ ದೈಹಿಕ ಸಂಬಂಧ ಬೆಳೆಸಿದ್ದ. ಜನವರಿ ತಿಂಗಳಿನಲ್ಲಿ ಗರ್ಭಪಾತವನ್ನೂ ಮಾಡಿಸಿದ್ದ. ಮ್ಯಾಧ್ಯೂ ತಾಯಿ ತಮ್ಮ ಮಗನೊಂದಿಗೆ ಇರದಂತೆ ಹೇಳುತ್ತಿದ್ದರು. ಈ ನಡುವೆ ಮತ್ತೊಮ್ಮೆ ಗರ್ಭಿಣಿಯಾಗಾದ ಮ್ಯಾಥ್ಯೂ ಮದುವೆಯಾಗಲು ನಿರಾಕರಿಸಿದ. ಪೋಷಕರೊಂದಿಗೆ ಮನೆಬಿಟ್ಟು ಹೊರಟು ಹೋದ ಎಂದು ಮಹಿಳೆ ಹೇಳಿದ್ದಾರೆ.

Scroll to Top