‘ಬೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ’- ಮುಖ್ಯಮಂತ್ರಿ ಸಿದ್ದರಾಮಯ್ಯ



(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು : ಪದ್ಮಭೂಷಣ ಎಸ್.ಎಲ್ ಬೈರಪ್ಪನವರು ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಬೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪದ್ಮಭೂಷಣ ಹಿರಿಯ ಸಾಹಿತಿ ದಿವಂಗತ ಎಸ್.ಎಲ್.ಬೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.







ಮೈಸೂರಿನಲ್ಲಿ ಸ್ಮಾರಕ






ಎಸ್.ಎಲ್.ಬೈರಪ್ಪನವರ ಸ್ಮಾರಕ ನಿರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಹೇಳಿದರೆಂದು ಸ್ಮಾರಕ ನಿರ್ಮಿಸುವುದಿಲ್ಲ. ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. ಮೈಸೂರಿನಲ್ಲಿಯೇ ತಮ್ಮ ಜೀವಿತಾವಧಿಯನ್ನು ಕಳೆದಿದ್ದು, ವಿದ್ಯಾಭ್ಯಾಸ, ಸಾಹಿತ್ಯಕೃಷಿಯಲ್ಲಿ ನಡೆಸಿದ್ದರು ಎಂದರು.

ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೈರಪ್ಪನವರೊಂದಿಗೆ ಮುಖ್ಯಮಂತ್ರಿಗಳ ಒಡನಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಸಾಹಿತ್ಯ ಹಾಗೂ ಸ್ನೇಹ ಬೇರೆಯಾಗಿದ್ದು, ನಮ್ಮ ದೃಷ್ಟಿಕೋನಗಳು ಬೇರೆಯಾಗಿದ್ದರೂ, ಉತ್ತಮ ಬಾಂಧವ್ಯವಿತ್ತು ಎಂದರು. ಬೈರಪ್ಪನವರ ಅಂತ್ಯಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸಲಿದ್ದಾರೆ. ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿರುವ ಬೈರಪ್ಪನವರು ನಾಡು ಕಂಡ ಶ್ರೇಷ್ಠ ಸಾಹಿತಿಗಳಾಗಿದ್ದರು. ಯಾವುದೇ ಪ್ರಶಸ್ತಿಗೂ ಹಂಬಲಿಸದ ಬೈರಪ್ಪನವರಿಗೆ ಅವರ ಸಾಹಿತ್ಯದ ಕೊಡುಗೆಯನ್ನು ಪರಿಗಣಿಸಿ ಜ್ಞಾನಪೀಠ ಪ್ರಶಸ್ತಿಯನ್ನು ನೀಡಿದ್ದರೆ ಉತ್ತಮವಾಗಿತ್ತು ಎಂದರು.

 

error: Content is protected !!
Scroll to Top