ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಜೇಶ್ವರದ ಕುಂಜತ್ತೂರು ಶಾಲಾ ಮೇಲ್ಛಾವಣಿ ಕುಸಿತ – ತಪ್ಪಿದ ಭಾರೀ ಅನಾಹುತ – News Kadaba

ಮಂಜೇಶ್ವರದ ಕುಂಜತ್ತೂರು ಶಾಲಾ ಮೇಲ್ಛಾವಣಿ ಕುಸಿತ – ತಪ್ಪಿದ ಭಾರೀ ಅನಾಹುತ

(ನ್ಯೂಸ್‌ ಕಡಬ) newskadaba.com,  ಸೆ.26  ಮಂಜೇಶ್ವರ :  ಶಾಲಾ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಸೆ.೨೫ರಂದು ಉದ್ಯಾವರ ದಲ್ಲಿರುವ ಕುಂಜತ್ತೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ತರಗತಿಯಲ್ಲಿ ಮಕ್ಕಳು ಇಲ್ಲದೆ ಇದ್ದುದರಿಂದ ಭಾರೀ ಅಪಾಯ ಸ್ವಲ್ಪದರಲ್ಲೇ ತಪ್ಪಿದೆ . ಬೆಳಿಗ್ಗೆ 8.30 ರ ಸುಮಾರಿಗೆ ಘಟನೆ ನಡೆದಿದೆ

2ನೇ ತರಗತಿಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಈ ಸಮಯದಲ್ಲಿ ಮಕ್ಕಳು ತರಗತಿಗೆ ತಲುಪಿರಲಿಲ್ಲ. ಹಂಚು ಹಾಸಿದ ಶಾಲೆಯ ಕೆಳಗೆ ಅಳವಡಿಸಲಾದ ಸ್ಲಾಬ್ ಕುಸಿದು ಬಿದ್ದಿದೆ . ಸಮೀಪದಲ್ಲಿದ್ದ ಶಾಲಾ ಸಿಬ್ಬಂದಿಗಳು ಅಪಾಯವಿಲ್ಲದೆ ಪಾರಾದರು. ಹಲವು ವರ್ಷಗಳ ಹಳೆಯದಾದ ಈ ಶಾಲಾ ಕಟ್ಟಡ ಪುನರ್ ನಿರ್ಮಿಸಬೇಕು ಎಂಬ ಒತ್ತಾಯ ಹಲವು ಸಮಯಗಳಿಂದ ಕೇಳಿ ಬರುತ್ತಿದೆ.

Scroll to Top