ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ – ಗುಡುಗು ಸಹಿತ ಭಾರಿ ಮಳೆ



(ನ್ಯೂಸ್‌ ಕಡಬ) newskadaba.com,  ಸೆ.26 ಬೆಂಗಳೂರು: ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಶುಕ್ರವಾರ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವ ಇದೆ. ಕರಾವಳಿಯಲ್ಲಿ ಸೆಪ್ಟೆಂಬರ್‌ 27ರವರೆಗೆ ಗಂಟೆಗೆ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.  ಇನ್ನು ಮುಂದಿನ 24 ಗಂಟೆಯಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 20°C ಹಾಗೂ 28°C ಇರಲಿದೆ.







ಸೆಪ್ಟಂಬರ್‌ 26ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಜಿಲ್ಲೆಳ ಹಲವೆಡೆ ಬಿರುಆಳಿಯೊಂದಿಗೆ ಗುರದಿಂದ ಸಾಧಾರಣ/ಗುಡುಉ ಸಹಿತ ಮಳೆಯಾಗುವ ನಿರೀಕ್ಷೆ ಇದೆ.






ಸೆಪ್ಟೆಂಬರ್‌ 27ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ  ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಸೆಪ್ಟೆಂಬರ್‌ 28ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

error: Content is protected !!
Scroll to Top