ನಟ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ: ಹ್ಯಾಕರ್ ಮೂಲ ಪತ್ತೆ



(ನ್ಯೂಸ್‌ ಕಡಬ) newskadaba.com,  ಸೆ.26 ಬೆಂಗಳೂರು: ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಪ್ರಕರಣದ ತನಿಖೆ ನಡೆಸುತ್ತಿರುವ ಸದಾಶಿವನಗರ ಪೊಲೀಸರು ಹ್ಯಾಕರ್‌ಗಳ ಮೂಲ ಪತ್ತೆ ಮಾಡಿದ್ದಾರೆ.ಉಪೇಂದ್ರ ಮತ್ತು ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿರುವ ವಂಚಕರು ಬಿಹಾರ ಮೂಲದವರು ಎಂದು ತಿಳಿದುಬಂದಿದೆ.





ಆರೋಪಿಗಳು ಬಿಹಾರದಿಂದಲೇ 4-5 ಜನರಿಂದ ಉಪೇಂದ್ರ ದಂಪತಿಯ ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಹಣ ಕೇಳಿದ್ದು, ಸುಮಾರು 1.65 ಲಕ್ಷ ರೂ. ಹಣ ಪಡೆದುಕೊಂಡು, 4 ಅಕೌಂಟ್ ಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.ಆ ನಾಲ್ಕು ಅಕೌಂಟ್ ಗಳು ಕೂಡ ನಕಲಿ ಆಗಿದ್ದು, ಅದೇ ನಂಬರ್ ಬಳಸಿ, ಅದೇ ದಿನ ತಮಿಳುನಾಡು, ಆಂಧ್ರಪ್ರದೇಶದಲ್ಲೂ ಕೆಲವರ ಮೊಬೈಲ್ ಗಳನ್ನು ಹ್ಯಾಕ್ ಮಾಡಿದ್ದಾರೆ.






ಸದ್ಯ ಸದಾಶಿವನಗರ ಪೊಲೀಸರು, ಹ್ಯಾಕರ್‌ಗಳ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿದ್ದು, ಬಿಹಾರಕ್ಕೆ ವಿಶೇಷ ತಂಡ ಕಳುಹಿಸಲು ಸಿದ್ದತೆ ನಡೆಸಿದ್ದಾರೆಂದು ತಿಳಿದಬಂದಿದೆ.

 

error: Content is protected !!
Scroll to Top